ಜೆಕರ್ಯ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಡೇರಿಯಸನ ಆಳ್ವಿಕೆಯ ಎರಡನೇ ವರ್ಷದ ಹನ್ನೊಂದನೆಯ ತಿಂಗಳಿನ (ಅಂದರೆ ಶೆಬಾತ್ ತಿಂಗಳಿನ) ಇಪ್ಪತ್ತನಾಲ್ಕನೆಯ ದಿನದಲ್ಲಿ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಸರ್ವೇಶ್ವರ ಕೊಟ್ಟ ದರ್ಶನವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕಂಡುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪರ್ಶಿಯದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೇ ತಿಂಗಳಿನ (ಶೆಬಾಟ್) ಇಪ್ಪತ್ತನಾಲ್ಕನೆಯ ದಿವಸ ಜೆಕರ್ಯನು ಯೆಹೋವನಿಂದ ಇನ್ನೊಂದು ಸಂದೇಶವನ್ನು ಪಡೆದನು. ಈತನು ಪ್ರವಾದಿಯಾದ ಇದ್ದೋವಿನ ಮಗನಾದ ಬೆರೆಕ್ಯನ ಮಗನು. ಆ ಸಂದೇಶವು ಹೀಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು: ಅಧ್ಯಾಯವನ್ನು ನೋಡಿ |