ಜೆಕರ್ಯ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ನಾನು, “ಸ್ವಾಮೀ, ಈ ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, “ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |