Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದುಲೆಬನೋನುಗಳ ಪ್ರಾಂತಕ್ಕೆ ಬರಮಾಡುವೆನು; ಅವರಿಗೆ ಸಾಕಾದಷ್ಟು ಸ್ಥಳ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಅವರನ್ನು ಈಜಿಪ್ಟ್‌ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದ್ದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:10
16 ತಿಳಿವುಗಳ ಹೋಲಿಕೆ  

ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.


ಸೆರೆಹೋಗಿರುವ ಆ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.


ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು