Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್ ನದಿಯೆಲ್ಲಾ ತಳದ ತನಕ ಒಣಗುವುದು. ಅಶ್ಶೂರದ ಗರ್ವವು ತಗ್ಗಿಸಲ್ಪಡುವುದು, ಐಗುಪ್ತದ ರಾಜದಂಡವು ತಪ್ಪಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಕಷ್ಟವೆಂಬ ಕಡಲನ್ನು ದಾಟಿ ಬರುವರು, ಅಲ್ಲಕಲ್ಲೋಲವಾದ ಸಮುದ್ರವನ್ನು ಭೇದಿಸಿಬಿಡುವರು, ನೈಲ್‍ನದಿಯೆಲ್ಲಾ ತಳದ ತನಕ ಒಣಗುವದು, ಅಶ್ಶೂರದ ಗರ್ವವು ತಗ್ಗಿಸಲ್ಪಡುವದು, ಐಗುಪ್ತದ ರಾಜದಂಡವು ತಪ್ಪಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಬವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 10:11
25 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು, ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು. ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ, ಹೊರಿಸಿದ ಹೊರೆಯು ನನ್ನ ಜನರ ಹೆಗಲ ಮೇಲಿನಿಂದ ದೂರವಾಗುವುದು.


ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ?


ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು