ಜೆಕರ್ಯ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು. ಅಧ್ಯಾಯವನ್ನು ನೋಡಿ |