ಜೆಕರ್ಯ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.