ಜೆಕರ್ಯ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಈ ದೇಶಕ್ಕೆ ಒಬ್ಬ ಹೊಸ ಕುರುಬನನ್ನು ನೇಮಕ ಮಾಡುವೆನೆಂದು ಆ ರೀತಿಯಾಗಿ ತೋರಿಸುವೆನು. ಆದರೆ ಈ ಮನುಷ್ಯನಿಗೆ ನಾಶಮಾಗುತ್ತಿರುವ ಕುರಿಗಳನ್ನು ಪರಾಮರಿಸಲು ಸಾಧ್ಯವಾಗುವುದಿಲ್ಲ. ಗಾಯಗೊಂಡ ಕುರಿಗಳನ್ನು ಗುಣಮಾಡಲು ಅವನಿಂದ ಸಾಧ್ಯವಾಗುವುದಿಲ್ಲ. ಸಾಯದೆ ಉಳಿದ ಕುರಿಗಳಿಗೆ ಆಹಾರ ಕೊಡಲು ಅವನಿಂದ ಸಾಧ್ಯವಾಗುವುದಿಲ್ಲ. ಪುಷ್ಟಿಕರವಾದ ಕುರಿಗಳನ್ನು ಪೂರ್ತಿಯಾಗಿ ತಿಂದುಹಾಕಲಾಗುವದು. ಅದರ ಗೊರಸುಗಳು ಮಾತ್ರವೇ ಉಳಿಯುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು. ಅಧ್ಯಾಯವನ್ನು ನೋಡಿ |
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”