Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆಲಸಕ್ಕೆ ಬಾರದ ಕುರುಬನೇ, ನೀನು ನನ್ನ ಕುರಿಗಳನ್ನು ತೊರೆದುಬಿಟ್ಟೆ. ಅವನನ್ನು ಶಿಕ್ಷಿಸಿರಿ! ಖಡ್ಗದಿಂದ ಅವನ ಬಲಗೈಯನ್ನು ಕತ್ತರಿಸಿಹಾಕಿರಿ, ಮತ್ತು ಬಲಗಣ್ಣನ್ನು ಕಿತ್ತುಹಾಕಿರಿ. ಆಗ ಅವನ ಬಲಗೈ ಅಪ್ರಯೋಜಕವಾಗುವದು, ಬಲಗಣ್ಣು ದೃಷ್ಟಿಹೀನವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 11:17
28 ತಿಳಿವುಗಳ ಹೋಲಿಕೆ  

“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,


ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.


ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.


ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು