ಜೆಕರ್ಯ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?