Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 12:8
53 ತಿಳಿವುಗಳ ಹೋಲಿಕೆ  

ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;


ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.


ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು