Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:2
40 ತಿಳಿವುಗಳ ಹೋಲಿಕೆ  

‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನೋಫಿನ ವಿಗ್ರಹಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತ ದೇಶದಲ್ಲಿ ಇನ್ನು ಯಾವ ಅರಸನೂ ಇರಲಾರನು; ನಾನು ಆ ದೇಶಕ್ಕೆ ಭಯವನ್ನು ಉಂಟುಮಾಡುವೆನು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.


“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.


ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


“‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.


ಇನ್ನು ಮೇಲೆ ಇಸ್ರಾಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು, ಮೋಸದ ಕಣಿಯೂ ಇರದು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.


ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿ, ನ್ಯಾಯ, ಪ್ರೀತಿ ಮತ್ತು ದಯೆಗಳಿಂದ ನಿನ್ನನ್ನು ವರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು