Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 13:7
76 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.


ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಆಗ ನಾನು ದೀನಾವಸ್ಥೆಯಲ್ಲಿದ್ದ ಆ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು, “ಕೊಯ್ಗುರಿಗಳ ಮಂದೆಯನ್ನು ಕಾಯಿ;


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.


ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು