Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ನ್ಯಾಯತೀರಿಸುವ ದಿನ ಬಂದಿದೆ. ನೀವು ಸುಲಿದುಕೊಂಡ ಐಶ್ವರ್ಯವು ನಿಮ್ಮ ಪಟ್ಟಣದಲ್ಲಿ ಪಾಲು ಮಾಡಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:1
12 ತಿಳಿವುಗಳ ಹೋಲಿಕೆ  

ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು