Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆರೂಸಲೇವಿುನ ಮೇಲೆ ಯುದ್ಧಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯನ್ನು ತಗಲಿಸುವನು - ಹೆಜ್ಜೆಯ ಮೇಲೆ ನಿಂತ ನಿಂತ ಹಾಗೆಯೇ ಅವರ ಮಾಂಸವು ಕೊಳೆತುಹೋಗುವದು, ಕಣ್ಣು ಗುಣಿಯಲ್ಲೇ ಇಂಗುವದು, ನಾಲಿಗೆಯು ಬಾಯಲ್ಲೇ ಕ್ಷಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:12
34 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.


ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.


ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.


ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.


ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು