ಜೆಕರ್ಯ 14:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನಂತರ ಯೆರೂಸಲೇವಿುನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೂ ಪ್ರತಿವರುಷವು ಹೊರಟುಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಜೆರುಸಲೇಮಿನೊಂದಿಗೆ ಯುದ್ಧಮಾಡಲು ಬಂದವರಲ್ಲಿ ಕೆಲವರು ಸಾಯದೆ ಉಳಿಯುವರು. ಅವರೆಲ್ಲರು ಪ್ರತಿವರ್ಷ ಅರಸನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಜೆರುಸಲೇಮಿಗೆ ಬರುವರು. ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು. ಅಧ್ಯಾಯವನ್ನು ನೋಡಿ |