Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವದಕ್ಕೆ ಬರುವದಿಲ್ಲವೋ ಅವರಿಗೆ ಮಳೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:17
27 ತಿಳಿವುಗಳ ಹೋಲಿಕೆ  

ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


“ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ,


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,


“ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು