ಜೆಕರ್ಯ 14:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಐಗುಪ್ತ ಕುಲದವರು ಹೊರಟು ಬಾರದಿದ್ದರೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದಿರುವ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು. ಅಧ್ಯಾಯವನ್ನು ನೋಡಿ |