ಜೆಕರ್ಯ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು. ಅಧ್ಯಾಯವನ್ನು ನೋಡಿ |