Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಸಮಯದಲ್ಲಿ ಸಮಸ್ತವೂ ಯೆಹೋವನಿಗೆ ಸೇರಿದ್ದಾಗಿರುವದು. ಕುದುರೆಗಳ ಮೇಲಿರುವ ಜೀನಿನ ಮೇಲೂ ಸರ್ವಶಕ್ತನಾದ “ಯೆಹೋವನಿಗೆ ಇದು ಮೀಸಲಾಗಿರುವದು” ಎಂದು ಬರೆಯಲ್ಪಡುವದು. ಯೆಹೋವನ ಆಲಯದಲ್ಲಿ ಉಪಯೋಗಿಸುವ ಎಲ್ಲಾ ಮಡಕೆಗಳು ಯಜ್ಞವೇದಿಕೆಯ ಮೇಲೆ ಉಪಯೋಗಿಸುವ ಬೋಗುಣಿಗಳಷ್ಟೇ ಮುಖ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:20
43 ತಿಳಿವುಗಳ ಹೋಲಿಕೆ  

ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.


ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.


ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡಲ್ಲಾಗಲಿ (ದೊಡ್ಡ ಹಂಡೆ), ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೆಂದು ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುತ್ತಿದ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.


ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು