Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೆಹೋವನು ಆ ಜನಾಂಗಗಳ ವಿರುದ್ಧವಾಗಿ ಯುದ್ಧ ಮಾಡುವನು. ಅದು ಭಯಂಕರವಾದ ಕಾದಾಟವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:3
22 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.”


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು