Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 14:5
30 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.


ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.


ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.


ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು