ಜೆಕರ್ಯ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿ |