ಜೆಕರ್ಯ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.” ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”