ಜೆಕರ್ಯ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು - ಯೆರೂಸಲೇವಿುನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವದರಿಂದ ಅದು ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು. ಅಧ್ಯಾಯವನ್ನು ನೋಡಿ |