Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:8
50 ತಿಳಿವುಗಳ ಹೋಲಿಕೆ  

ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.


ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.


ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.


ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


‘ಯೆರೂಸಲೇಮ್ ಹೊಲಸಾಗಿ ಹೋಗಲಿ. ಚೀಯೋನಿನ ನಾಶನವನ್ನು ಕಣ್ಣು ತುಂಬಾ ನೋಡೋಣ’” ಎಂದು ಯೋಚಿಸುವ ಬಹು ಜನಾಂಗಗಳು ನಿನಗೆ ವಿರುದ್ಧವಾಗಿ ಕೂಡಿ ಬಂದಿವೆ.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


“‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.


ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.


ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನಿನಗೆ ಗೊತ್ತಾಗುವುದು.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.


ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು