Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು ಎಂದು ಹೇಳುತ್ತಾನೆ; ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 2:9
30 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.


ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.


ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು.


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.


ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು