ಜೆಕರ್ಯ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವದನ್ನು ಯೆಹೋವನು ನನಗೆ ತೋರಿಸಿದನು; ಸೈತಾನನು ಯೆಹೋಶುವನಿಗೆ ಪ್ರತಿಕಕ್ಷಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಅಧ್ಯಾಯವನ್ನು ನೋಡಿ |