Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:2
22 ತಿಳಿವುಗಳ ಹೋಲಿಕೆ  

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.


ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು