Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:7
30 ತಿಳಿವುಗಳ ಹೋಲಿಕೆ  

ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.


ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು.


ಆ ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.


ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.


ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ.


ಆಗ ಯೆಹೋವನ ದೂತನು ಯೆಹೋಶುವನಿಗೆ ಈ ಮಾತನ್ನು ಕೊಟ್ಟನು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು