ಜೆಕರ್ಯ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು. ಅಧ್ಯಾಯವನ್ನು ನೋಡಿ |