Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ “ಏನು ನೋಡುತ್ತೀ?” ಎಂದು ಕೇಳಲು ನಾನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಬಂದು ನನ್ನನ್ನೆಬ್ಬಿಸಿದನು. ನಾನು ನಿದ್ರೆಯಿಂದ ಎದ್ದೇಳುವವನಂತೆ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:1
12 ತಿಳಿವುಗಳ ಹೋಲಿಕೆ  

ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.


ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,


ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.


ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.


ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,


ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು