ಜೆಕರ್ಯ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.