ಜೆಕರ್ಯ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ” ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.