Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಸೂತ್ರಧಾರಿಯಾದ ದೂತನು ನನ್ನ ಬಳಿ ಬಂದು: “ಮತ್ತೊಂದು ಏನೋ ಬರುತ್ತಿದೆ, ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನಂತರ ವಿವರಿಸುವ ದೂತನು ಹತ್ತಿರ ಬಂದು - ಕಂಡುಬರುತ್ತಿರುವ ಆ ವಸ್ತು ಏನೆಂದು ನೋಡು ಎಂಬದಾಗಿ ನನಗೆ ಹೇಳಲು ನಾನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ನಿನ್ನ ಕಣ್ಣೆತ್ತಿ ಹೊರಡುವಂಥದ್ದು ಏನೆಂದು ನೋಡು,” ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:5
6 ತಿಳಿವುಗಳ ಹೋಲಿಕೆ  

ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.


ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.


ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,


ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.


ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.


ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು