Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅದು ಏನೋ ನನಗೆ ಗೊತ್ತಾಗುತ್ತಿಲ್ಲ. ಅದು ಏನಿರಬಹುದು?” ಎಂದು ನಾನು ವಿಚಾರಿಸಿದೆನು. ಅದಕ್ಕವನು, “ಅದು ಒಂದು ಅಳೆಯುವ ಬುಟ್ಟಿ, ಈ ಬುಟ್ಟಿಯು ಈ ದೇಶದ ಜನರ ಪಾಪವನ್ನು ಅಳೆಯುವ ಬುಟ್ಟಿಯಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:6
8 ತಿಳಿವುಗಳ ಹೋಲಿಕೆ  

ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?


ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.


ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಒಬ್ಬ ಸ್ತ್ರೀ ಅದರಲ್ಲಿ ಕುಳಿತುಕೊಂಡಿದ್ದಳು.


“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.


ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!


ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?


ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು