Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದೂತನು ಹೇಳಿದ್ದೇನೆಂದರೆ, “ಇದು ದುಷ್ಟತ್ವವು” ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೂತ್ರಧಾರಿಯಾದ ದೂತನು: “ಇವಳೇ ಪಾಪದ ಪ್ರತೀಕ,” ಎಂದು ಹೇಳಿ, ಅವಳನ್ನು ಕೊಳಗದೊಳಗೆ ಅದುಮಿ, ಭಾರವಾದ ಆ ಸೀಸದ ಮುಚ್ಚಳವನ್ನು ತಟ್ಟನೆ ಕೊಳಗದ ಬಾಯಿಗಿಟ್ಟು ಮುಚ್ಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಆ ದೂತನು, “ಆ ಸ್ತ್ರೀಯು ದುಷ್ಟತನವನ್ನು ಸೂಚಿಸುತ್ತಾಳೆ” ಎಂದು ಹೇಳಿ ದೂತನು ಆ ಸ್ತ್ರೀಯನ್ನು ಬುಟ್ಟಿಯ ತಳಕ್ಕೆ ನೂಕಿ, ಸೀಸದ ಮುಚ್ಚಳವನ್ನು ಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:8
11 ತಿಳಿವುಗಳ ಹೋಲಿಕೆ  

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.


ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಲ್ಪಡಲಾಗಿ ಆಹಾ, ಒಬ್ಬ ಸ್ತ್ರೀ ಅದರಲ್ಲಿ ಕುಳಿತುಕೊಂಡಿದ್ದಳು.


ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?


ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.


ನಿನ್ನ ಸಂತತಿಯ ನಾಲ್ಕನೆಯ ತಲೆಮಾರಿನವರು ಇಲ್ಲಿಗೆ ತಿರುಗಿ ಬರುವರು, ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ” ಎಂದು ಹೇಳಿದನು.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ; ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು