ಜೆಕರ್ಯ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಕೊಕ್ಕರೆಯ ರೆಕ್ಕೆಗಳಂತಿರುವ ರಭಸವಾದ ರೆಕ್ಕೆಗಳುಳ್ಳ ಇಬ್ಬರು ಮಹಿಳೆಯರು ಬರುತ್ತಿರುವುದನ್ನು ಕಂಡೆನು. ಅವರು ಕೊಳಗದ ಪಾತ್ರೆಯನ್ನು ಎತ್ತಿಕೊಂಡು ಹಾರಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಕಣ್ಣೆತ್ತಿನೋಡಲು ಆಹಾ, ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು; ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು; ಅವರು ಪೀಪಾಯಿಯನ್ನು ಭೂಮ್ಯಾಕಾಶಗಳ ಅಂತರಾಳದಲ್ಲಿ ಎತ್ತಿಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು. ಅಧ್ಯಾಯವನ್ನು ನೋಡಿ |