ಜೆಕರ್ಯ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು. ಅಧ್ಯಾಯವನ್ನು ನೋಡಿ |