Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಯೋಷೀಯ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್, ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:14
14 ತಿಳಿವುಗಳ ಹೋಲಿಕೆ  

ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,


ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು