Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:8
15 ತಿಳಿವುಗಳ ಹೋಲಿಕೆ  

“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ


ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ನಾಯಕರಾದ ಓರೇಬ್ ಜೇಬರನ್ನು ಒಪ್ಪಿಸಿ ಕೊಟ್ಟಿದ್ದಾನಲ್ಲಾ! ಇದಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದ್ದೇನೆ?” ಎಂದನು. ಈ ಮಾತುಗಳನ್ನು ಕೇಳಿದಾಗ ಅವರ ಸಿಟ್ಟಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು