Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ಪಿತೃಗಳಾದರೋ ಗಮನಿಸಲೊಲ್ಲದೆ ಹೆಗಲುಕೊಡದೆ ಹೋದರು. ಕೇಳಬಾರದೆಂದು ಕಿವಿಮಂದ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 7:11
41 ತಿಳಿವುಗಳ ಹೋಲಿಕೆ  

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು