ಜೆಕರ್ಯ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.