ಜೆಕರ್ಯ 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನ್ನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರಿಸುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರುಬೀಳುವಂತೆ ನಾನು ಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |