Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಈಗ ಜೆರುಸಲೇಮಿನವರಿಗೂ ಜುದೇಯದ ಜನರಿಗೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿದ್ದೇನೆ. ಆದುದರಿಂದ ಹೆದರಬೇಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಕಾಲದಲ್ಲಿ ಯೆರೂಸಲೇವಿುಗೂ ಯೆಹೂದ ಕುಲಕ್ಕೂ ಮೇಲು ಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಈಗ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಜೆರುಸಲೇಮಿಗೂ ಯೆಹೂದದ ಜನರಿಗೂ ಒಳ್ಳೆಯದನ್ನೇ ಮಾಡುವೆನು. ಆದ್ದರಿಂದ ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:15
10 ತಿಳಿವುಗಳ ಹೋಲಿಕೆ  

ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು