Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:19
27 ತಿಳಿವುಗಳ ಹೋಲಿಕೆ  

ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.


“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;


“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,


ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


“ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಒಂಭತ್ತನೆಯ ವರ್ಷದ, ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು