ಜೆಕರ್ಯ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಚೀಯೋನ್ ಪರ್ವತವನ್ನು ನಾನು ಸತ್ಯವಾಗಿಯೂ ಪ್ರೀತಿಸುತ್ತೇನೆ. ನನಗೆ ನಂಬಿಗಸ್ತಳಾಗದಿದ್ದಾಗ ನಾನು ಆಕೆಯ ಮೇಲೆ ಕೋಪಗೊಳ್ಳುವಷ್ಟರವರೆಗೆ ಪ್ರೀತಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೇನೆ. ಅತಿ ಉಗ್ರದಿಂದ ಅವಳ ವಿಷಯದಲ್ಲಿ ರೋಷವುಳ್ಳವನಾಗಿದ್ದೇನೆ.” ಅಧ್ಯಾಯವನ್ನು ನೋಡಿ |
ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.