Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು; ನಾನು ಅವರಿಗೆ ಒಳ್ಳೆಯವನಾದ ನಂಬಿಗಸ್ತನಾದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:8
30 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.


ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ನಾನು ಅವರನ್ನು ಐಗುಪ್ತ ದೇಶದೊಳಗಿಂದ ಹಿಂದಕ್ಕೆ ಕರೆದುತರುವೆನು; ಅಶ್ಶೂರದಿಂದ ಕೂಡಿಸುವೆನು; ಗಿಲ್ಯಾದ್, ಲೆಬನೋನುಗಳ ಪ್ರಾಂತ್ಯಕ್ಕೆ ಬರಮಾಡುವೆನು; ಅವರಿಗೆ ಸಾಕಾಗುವಷ್ಟು ಸ್ಥಳ ಸಿಕ್ಕದು.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು