ಜೆಕರ್ಯ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು. ಅಧ್ಯಾಯವನ್ನು ನೋಡಿ |