ಜೆಕರ್ಯ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಷ್ಕೆಲೋನು ಇದನ್ನು ನೋಡಿ ಹೆದರುವದು; ಗಾಜವು ಸಹ ಅತಿಸಂಕಟಪಡುವದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಅಷ್ಕೆಲೋನಿನ ಜನರು ಇದನ್ನು ನೋಡಿ ಭಯಗ್ರಸ್ತರಾಗುವರು. ಗಾಜದ ಜನರು ಭಯದಿಂದ ನಡುಗುವರು. ಮತ್ತು ಎಕ್ರೋನಿನ ಜನರು ಇದನ್ನೆಲ್ಲಾ ನೋಡಿ ನಿರೀಕ್ಷೆ ಇಲ್ಲದವರಾಗಿರುವರು. ಗಾಜದಲ್ಲಿ ಯಾವ ಅರಸನೂ ಉಳಿಯನು. ಅಷ್ಕೆಲೋನಿನಲ್ಲಿ ಯಾರೂ ವಾಸಿಸರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು. ಅಧ್ಯಾಯವನ್ನು ನೋಡಿ |