ಜೆಕರ್ಯ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು. ಅಧ್ಯಾಯವನ್ನು ನೋಡಿ |